ಮಂಗಳೂರು: ನಾಳೆ ಮತ್ತು ನಾಡಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಬಿಜೆಪಿ ಮಳೆ ಹಾನಿ ಪರಿಶೀಲನಾ ತಂಡ ಭೇಟಿ ನೀಡಲಿದೆ.
ರಾಜ್ಯದಲ್ಲಿ ಮಳೆ ಹಾನಿ ಪರಿಶೀಲನೆಗೆ ಒಟ್ಟು ಆರು ತಂಡಗಳನ್ನು ರಚಿಸಲಾಗಿದ್ದು, ಎರಡು ದಿನಗಳ ಕಾಲ ಹನ್ನೆರಡು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ತಂಡ ಪ್ರವಾಸ ನಡೆಸಲಿದ್ದು, ಶಾಸಕರಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಅಭಯ್ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವಿಠಲ್ ಹಲಗೇಕರ್, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಜಿಲ್ಲಾಧ್ಯಕ್ಷರಾದ ಗೀತಾ ಸುತಾರ್, ಸುಭಾಷ್ ಪಾಟೀಲ್ ಮತ್ತು ಸತೀಶ್ ಕುಂಪಲ ಇರಲಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ನೇತೃತ್ವದ ತಂಡ ಪರಿಶೀಲನೆ ನಡೆಸಲಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಶಾಸಕರಾದ ವಿ. ಸುನೀಲ್ ಕುಮಾರ್, ಭೈರತಿ ಬಸವರಾಜ, ಎಸ್. ಮುನಿರಾಜು, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಮತ್ತು ಎನ್.ಎಂ. ರವಿ ಕಾಳಪ್ಪ ಪಾಲ್ಗೊಳ್ಳಲಿದ್ದಾರೆ.


