ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿಯಾಗಿದೆ.9 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ.

ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಮತ್ತು ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ.

ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ.