Wednesday, June 24, 2026
Homeಕರಾವಳಿಸೆಪ್ಟೆಂಬರ್.‌1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ; ಬಿ.ವೈ.ವಿಜಯೇಂದ್ರ

ಸೆಪ್ಟೆಂಬರ್.‌1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ; ಬಿ.ವೈ.ವಿಜಯೇಂದ್ರ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರವು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದರಿಂದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರಬರಲು ಅನುಕೂಲವಾಗುವಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.    

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಸೂಕ್ತ ತನಿಖೆಗೆ ಒತ್ತಾಯಿಸಿ ಸೆಪ್ಟೆಂಬರ್ 01 ರಂದು ಸೋಮವಾರ ಧರ್ಮಸ್ಥಳ ಚಲೋ ನಡೆಸಲಿದೆ. ಷಢ್ಯಂತ್ರ ತನಿಖೆಯನ್ನು ಎನ್‍ಐಎಗೆ ವಹಿಸುವಂತೆ ಆಗ್ರಹಿಸಿ ಧರ್ಮಸ್ಥಳ ಚಲೋ ಇದಾಗಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಧರ್ಮಸ್ಥಳ ಚಲೋದಲ್ಲಿ ಭಾಗವಹಿಸ್ತಾರೆ. ಎಲ್ಲ ಕ್ಷೇತ್ರಗಳಿಂದಲೂ ಭಕ್ತರು, ಹಿಂದೂಗಳಿಂದ ಧರ್ಮಸ್ಥಳಕ್ಕೆ ಚಲೋ  ನಡೆಯಲಿದೆ. ಅಂದು ಬೆಳಗ್ಗೆ ಅವರವರ ಊರುಗಳಲ್ಲಿ ಪೂಜೆ ಮಾಡಿಕೊಂಡು ಧರ್ಮಸ್ಥಳ ಹೊರಡಬೇಕು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಇರಲಿದೆ ಎಂದು ಹೇಳಿದರು.  

- Advertisement -

Latest News

error: Content is protected !!