- Advertisement -
- Advertisement -
ಬೆಂಗಳೂರು: ಹಿಟ್ಲರ್ ಸಿದ್ದರಾಮಯ್ಯ ಎಂಬ ಇನ್ನೊಂದು ಹೆಸರಿನಲ್ಲಿ ಕರ್ನಾಟಕದಲ್ಲಿ ಆಡಳಿತ ಮಾಡುತ್ತಿದ್ದಾನೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಪೊಲೀಸರು ಮುಂದಾಗಿದ್ದ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಕಾರ್ಯಕರ್ತರ ಪರವಾಗಿ ಧ್ವನಿ ಎತ್ತಿದ್ದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಬೆಳ್ತಂಗಡಿ ಶಾಸಕರನ್ನು ಬಂಧಿಸಲು ಎಲ್ಲಾ ಸಿದ್ಧತೆ ಮಾಡಿತ್ತು ಎಂದು ಬಿಜೆಪಿ ಆರೋಪಿಸಿದೆ.
ಇದೇವೇಳೆ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದ ಪೊಲೀಸರ ಕ್ರಮ ಅಧಿಕಾರ ದುರುಪಯೋಗದ ಪರಮಾವಧಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಕೂಡಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಲ್ಲದೇ ಎಲ್ಲವನ್ನೂ ರಾಜಕೀಯ ದ್ವೇಷದ ಕಣ್ಣಿನಿಂದಲೇ ನೋಡುವ ರಾಜ್ಯ ಸರ್ಕಾರದ ನಿರ್ಧಾರ ಆಘಾತಕಾರಿ ಎಂದೂ ಸುನೀಲ್ ಕುಮಾರ್ ಹೇಳಿದ್ದಾರೆ.
- Advertisement -