Sunday, April 28, 2024
Homeತಾಜಾ ಸುದ್ದಿಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗೃಹ ಸಚಿವರು ರಾಜೀನಾಮೆ, ಮಹಿಳಾ ಆಯೋಗ ಭೇಟಿ ನೀಡಬೇಕು:ಬಿಜೆಪಿ ಮಹಿಳಾ...

ಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗೃಹ ಸಚಿವರು ರಾಜೀನಾಮೆ, ಮಹಿಳಾ ಆಯೋಗ ಭೇಟಿ ನೀಡಬೇಕು:ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಮಂಜುಳಾ ಒತ್ತಾಯ

spot_img
- Advertisement -
- Advertisement -

ಬೆಂಗಳೂರು: ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಗೃಹ ಸಚಿವರು
ಅವರು ರಾಜೀನಾಮೆ ಕೊಟ್ಟು ಹೊರಗೆ ಹೋಗಬೇಕು ಎಂದು ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಆಗ್ರಹಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುಳಾ, ಮೂರು ಜನರ ಮೇಲೆ ಆಸಿಡ್ ಹಾಕಿರುವುದು ಕೇರಳದಿಂದ ಬಂದವರು ಎಂಬ ಮಾಹಿತಿ ಇದ್ದು, ಕೇರಳದವರಿಗೆ ಇಲ್ಲಿ ಯಾಕೆ ರೆಡ್ ಕಾರ್ಪೆಟ್ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ ಮಹಿಳಾ ಆಯೋಗ ಸ್ಥಳಕ್ಕೆ ಹೋಗಿ ವಿಚಾರಿಸಬೇಕು ಎಂದು ಒತ್ತಾಯಿಸಿರುವ ಮಂಜುಳಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ನಿನಗೆ ಅಲ್ಲಿ ಕೆಲಸ ಮಾಡಲು ಆಗಲ್ಲ ಅಂದ್ರೆ, ಬಿಟ್ಟು ಹೋಗಿ, ನಿಮ್ಮ ಪುರುಷ ಸಚಿವರು ಕೆಲಸ ಮಾಡಲು ಬಿಡದಿದ್ರೆ ಹೊರಗೆ ಬನ್ನಿ ಎಂದು ಮಂಜುಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!