Sunday, June 7, 2026
Homeಕೊಡಗುಕೊಡಗಿಗೆ ಸಚಿವ ಸ್ಥಾನಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ!

ಕೊಡಗಿಗೆ ಸಚಿವ ಸ್ಥಾನಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ!

- Advertisement -
- Advertisement -

ಬೆಂಗಳೂರು: ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆದಿದೆ. ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಕುಶಾಲನಗರದಿಂದ ಸುಮಾರು 160 ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿದ್ದ 500 ರಷ್ಟು ಬೆಂಬಲಿಗರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಯಾಗಿ ನಡೆಸಿದ್ದಾರೆ.

ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೂಡಾ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ರಚನೆ ವೇಳೆ ಕೊಡಗು ಜಿಲ್ಲೆಗೆ ಯಾವುದೇ ಅವಕಾಶ ನೀಡಿರಲಿಲ್ಲ.

ಹೀಗಾಗಿ ಐದು ಬಾರಿಯ ಶಾಸಕ ಅಪ್ಪಚ್ಚು ರಂಜನ್ ಬೆಂಬಲಿಗ ಬಿಜೆಪಿ ಕಾರ್ಯಕರ್ತರು ಬೆಂಗಳೂರಿ‌ನಲ್ಲಿ ಪ್ರತಿಭಟನೆ ಮೂಲಕ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ.

- Advertisement -

Latest News

error: Content is protected !!