Thursday, July 16, 2026
Homeಕರಾವಳಿಮಂಗಳೂರುರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ

ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ

- Advertisement -
- Advertisement -

ಮಂಗಳೂರು: ಇಂದಿರಾ ಗಾಂಧಿ‌ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ಮಂಗಳೂರಿನಲ್ಲಿ ವಿಪಕ್ಷ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಛಾದಿಂದ ನಡೆದ ಪೋಸ್ಟರ್ ಅಭಿಯಾನದಲ್ಲಿ ಯುವ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿದ್ದರು.

ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ದ್ರೋಹಕ್ಕೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೇಳಲಿ ಎಂಬ ಪೋಸ್ಟರ್ ಅಂಟಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕ್ಲಾಕ್ ಟವರ್ ಸರ್ಕಲ್ ಮತ್ತು ಮಿನಿ ವಿಧಾನಸೌಧದ ಆವರಣ ಗೋಡೆಗೆ ಪೋಸ್ಟರ್ ಅಂಟಿಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಧಿಕ್ಕಾರ ಘೋಷಣೆ ಕೂಗಿದರು.

- Advertisement -

Latest News

error: Content is protected !!