Saturday, June 6, 2026
Homeಕರಾವಳಿಉಡುಪಿಮಣಿಪಾಲದಲ್ಲಿ ನಡೆದ ಎರಡು ದಿನಗಳ ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಮಾರೋಪ

ಮಣಿಪಾಲದಲ್ಲಿ ನಡೆದ ಎರಡು ದಿನಗಳ ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಮಾರೋಪ

- Advertisement -
- Advertisement -

ಮಣಿಪಾಲ: ಬಿಜೆಪಿ ಯುವ ಮೋರ್ಛಾದ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಇಂದು ಮಣಿಪಾಲದಲ್ಲಿ ನಡೆಯಿತು.‌

ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ‌ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಬಿಜೆಪಿ ಯುವ ಮೋರ್ಛಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಕುಮಾರ್ ಮತ್ತು ಉಡುಪಿ ಶಾಸಕ ರಘುಪತಿ ಭಟ್ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದಲ್ಲಿ ಸಚಿವ ಸುನೀಲ್ ಕುಮಾರ್ ಯುವ ಮೋರ್ಛಾ ಕಾರ್ಯಕಾರಿಣಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ನಿನ್ನೆ ಮತ್ತು ಇಂದು ಎರಡು ದಿನಗಳ ಕಾಲ‌ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿತ್ತು.‌

- Advertisement -

Latest News

error: Content is protected !!