Thursday, June 4, 2026
Homeಕೊಡಗುಸಿದ್ದರಾಮಯ್ಯ ಕೊಡಗು ಪ್ರವೇಶಕ್ಕೆ ಬಿಜೆಪಿ ಕಾರ್ಯಕರ್ತರಿಂದ ತೀವ್ರ ವಿರೋಧ

ಸಿದ್ದರಾಮಯ್ಯ ಕೊಡಗು ಪ್ರವೇಶಕ್ಕೆ ಬಿಜೆಪಿ ಕಾರ್ಯಕರ್ತರಿಂದ ತೀವ್ರ ವಿರೋಧ

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯಿಂದ ಪೊನ್ನಂಪೇಟೆ ತಾಲೂಕಿನ ಆನೆಚೌಕೂರು ಗೇಟ್ ಮೂಲಕ ತಿತಿಮತಿಗೆ ಆಗಮಿಸುತ್ತಲೇ ವಿರೋಧ ವ್ಯಕ್ತವಾಗಿದೆ.

ತಿತಿಮತಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಆಕ್ರಮಣದ ವ್ಯಕ್ತಪಡಿಸಿದ ಬಿಜೆಪಿ ಯುವ ಮೋರ್ಛಾ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿಗೆ ಪೋಸ್ಟರ್ ಎಸೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ ನಡೆದಿದ್ದು, ಸಿದ್ಧರಾಮಯ್ಯ ವಿರುದ್ಧ ಗೋ ಬ್ಯಾಕ್ ಪೋಸ್ಟರ್ ಪ್ರದರ್ಶಿಸಿದ್ದಾರೆ.

ಸಿದ್ದರಾಮಯ್ಯ ಟಿಪ್ಪು ಶಿಷ್ಯ ಎಂದು ಟೀಕೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು, ಆನೆಚೌಕೂರಿನಿಂದ ತಿತಿಮತಿಗೆ ಆಗಮಿಸುತ್ತಲೇ ಪ್ರತಿಭಟನೆ ನಡೆಸಿದ್ದಾರೆ.

ಇಂದು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ, ದೇವರಕೊಲ್ಲಿ ಮತ್ತು ಕೊಯನಾಡು ಪ್ರದೇಶಕ್ಕೆ ಭೇಟೊ ನೀಡಿ ಅತಿವೃಷ್ಟಿ ಹಾನಿ ವೀಕ್ಷಣೆ ಮಾಡಲಿದ್ದಾರೆ.

- Advertisement -

Latest News

error: Content is protected !!