- Advertisement -
![]()
- Advertisement -
ಬೆಂಗಳೂರು; ಖ್ಯಾತ ಚಿತ್ರ ಕಲಾವಿದ ಬಿಕೆಎಸ್ ವರ್ಮಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ನಿರಂತರವಾಗಿ ಈ ಕಲೆಯಲ್ಲಿ ಹೊಸಹೊಸ ಪ್ರಯೋಗಗಳನ್ನು ಮಾಡುತ್ತಾ ಅವಿರತವಾಗಿ ಶ್ರಮಿಸುತ್ತಾ ಬಂದ ಬಿಕೆಎಸ್ ವರ್ಮಾ ಓದಿದ್ದು ಕೇವಲ ಎರಡನೇ ತರಗತಿ.ಆದರೆ ಸಾಧನೆ ಮಾತ್ರ ಇಡೀ ವಿಶ್ವವೇ ತಿರುಗಿ ನೋಡುವಂತಹದ್ದು.
ಬಿ.ಕೆ.ಎಸ್.ವರ್ಮಾ ಅವರ ಕಲಾಸೇವೆಯನ್ನು ಗುರುತಿಸಿ ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಯನ್ನು ನೀಡಿತ್ತು. ಪರಿಸರಪ್ರೇಮಕ್ಕೆ ಉದಾಹರಣೆಯಾದ ಅತ್ಯಂತ ಪ್ರಭಾವಿ ವರ್ಣಚಿತ್ರ, ವೃಕ್ಷಮಾಲಿನಿಗೆ, ಲಲಿತಕಲಾ ಅಕಾಡೆಮಿ ಪ್ರಶಸ್ತಿ ದೊರೆತಿದೆ.ವಿದೇಶಗಳಲ್ಲೂ ತಮ್ಮ ಚಿತ್ರಕಲೆಯನ್ನು ಪ್ರದರ್ಶಿಸಿ ಭಾರತದ ಒಬ್ಬ ಹೆಮ್ಮೆಯ ಕಲಾವಿದರೆಂದು ಗುರುತಿಸಿಕೊಂಡಿದ್ದಾರೆ.
- Advertisement -


