Friday, October 4, 2024
Homeತಾಜಾ ಸುದ್ದಿಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್ ಮೇಲ್; ಕಾಂಗ್ರೆಸ್‌ನ ಸಂಧ್ಯಾ, ಪವಿತ್ರಾ ನಾಗರಾಜ್ ಮೇಲೆ FIR

ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್ ಮೇಲ್; ಕಾಂಗ್ರೆಸ್‌ನ ಸಂಧ್ಯಾ, ಪವಿತ್ರಾ ನಾಗರಾಜ್ ಮೇಲೆ FIR

spot_img
- Advertisement -
- Advertisement -

ಬೆಂಗಳೂರು: ಸಾಮಾಜಿಕ ಕಾರ್ಯಕರ್ತನಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ ಆರೋಪದಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಸಂಧ್ಯಾ, ಪವಿತ್ರಾ ನಾಗರಾಜ್ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಪ್ರಕರಣದ ವಿವರ: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು ಕಾಂಗ್ರೆಸ್ ಕಾರ್ಯಕರ್ತೆ ಸಂಧ್ಯಾ, ಪವಿತ್ರಾ ನಾಗರಾಜ್. ಈಕೆಯ ಜೊತೆ ಮತ್ತೊಬ್ಬ ಆರೋಪಿ ಪವಿತ್ರಾ ಎಂಬಾಕೆಯ ವಿರುದ್ಧವೂ ಭಾಸ್ಕರ್ ಪ್ರಸಾದ್ ದೂರು ನೀಡಿದ್ದು, ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಗಿ ಆರೋಪಿಸಿದ್ದಾರೆ. 

ಭಾಸ್ಕರ್‌ಗೆ 2 ವರ್ಷಗಳ ಹಿಂದೆ ಚಳುವಳಿ ಹಾಗೂ ಹೋರಾಟಗಳಲ್ಲಿ ಪವಿತ್ರಾ ಪರಿಚಯವಾಗಿತ್ತಂತೆ. ಕಳೆದ ಆಗಸ್ಟ್ 8 ರಂದು ವಾಟ್ಸ್‌ಆಪ್‌ನಲ್ಲಿ ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಿ ಅದರ ಫೋಟೋ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು 10 ಲಕ್ಷ ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಪವಿತ್ರಾ ಬೆದರಿಕೆ ಹಾಕಿದ್ದಾಳೆ ಎಂದು ದೂರಲಾಗಿದೆ. 

ಈ ಘಟನೆಯ ಕುರಿತು ಭಾಸ್ಕರ್ ಪ್ರಸಾದ್ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

- Advertisement -
spot_img

Latest News

error: Content is protected !!