Thursday, June 4, 2026
Homeಕರಾವಳಿಉಡುಪಿಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಕಾಲೇಜಿನ ವಿರುದ್ದ ಮಾತನಾಡಿದ...

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಕಾಲೇಜಿನ ವಿರುದ್ದ ಮಾತನಾಡಿದ ವಿಧ್ಯಾರ್ಥಿನಿಗೆ ಬಂತು ಅಶ್ಲೀಲ ಸಂದೇಶ

- Advertisement -
- Advertisement -

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಕಾಲೇಜಿನ ವಿರುದ್ದ ಮಾತನಾಡಿದ ವಿದ್ಯಾರ್ಥಿನಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶಗಳನ್ನು ರವಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.


ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಕಾಲೇಜಿನ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು. ಇದರ ಬೆನ್ನಲ್ಲೇ  ಜುಲೈ 28 ರಂದು ಇನ್ಸ್ಟಾಗ್ರಾಮ್​ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಆಕೆ ಬೆದರಿಕೆ, ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹಿಂದೂ ಸಂಘಟನೆಗಳು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ಮೇಲೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!