Thursday, June 4, 2026
Homeಕರಾವಳಿಬೆಳ್ತಂಗಡಿ : ವೇಣೂರು ಪಟಾಕಿ ದುರಂತ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ವೇಣೂರು ಪಟಾಕಿ ದುರಂತ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬೆಳ್ತಂಗಡಿ : ಪಟಾಕಿ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡಿದ್ದು ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಿದ್ದು ,ನಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು‌.‌ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ‌.

- Advertisement -

Latest News

error: Content is protected !!