Thursday, June 4, 2026
Homeಕರಾವಳಿಉಡುಪಿಕಾರ್ಕಳದಲ್ಲಿ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳದಲ್ಲಿ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ

- Advertisement -
- Advertisement -

ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ಅವಘಡ ಸಂಭವಿಸಿದ್ದು, ಸ್ಫೋಟದಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ.

ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದು ಸಂಪೂರ್ಣವಾಗಿ ಹಾನಿಗೊಳಗಾಗಿದೆ.

ದುರ್ಘಟನೆಯಲ್ಲಿ ಗಾಯಗೊಂಡ ಮಹಿಳೆಯರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

- Advertisement -

Latest News

error: Content is protected !!