Wednesday, June 3, 2026
Homeಕರಾವಳಿಮಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಂಸದರಿಂದ ರಕ್ತದಾನ, ಶಾಸಕರಿಂದ ದೇವಸ್ಥಾನದಲ್ಲಿ ಪೂಜೆ

ಮಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಂಸದರಿಂದ ರಕ್ತದಾನ, ಶಾಸಕರಿಂದ ದೇವಸ್ಥಾನದಲ್ಲಿ ಪೂಜೆ

- Advertisement -
- Advertisement -

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಛಾ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಮಂಗಳೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ರಕ್ತದಾನ ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಕ್ತದಾನ ಮಾಡಿದರು.

ಇದೇ ವೇಳೆ, ಬಿಜೆಪಿ ಕರಿಯಂಗಳ ಶಕ್ತಿಕೇಂದ್ರದ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸರ್ವಾಲಂಕಾರ ಪೂಜೆ ಸಲ್ಲಿಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪಾಲ್ಗೊಂಡಿದ್ದರು.

ಇನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಪೂಜೆ ಸಲ್ಲಿಸಿ ನರೇಂದ್ರ ಮೋದಿ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ನಡೆಯಿತು.

- Advertisement -

Latest News

error: Content is protected !!