- Advertisement -
![]()
- Advertisement -
ಕಲ್ಯಾಣಪುರ: ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ರಾಷ್ಟ್ರೀಯ ಸೇವಾ ಯೋಜನಾ ಘಟಕ ಯೂತ್ ರೆಡ್ ಕ್ರಾಸ್ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಇಂದು ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.


ಈ ಶಿಬಿರವನ್ನು ಶಂಭು ಶಂಕರ ಅಧ್ಯಕ್ಷರು ರೋಟರಿ ಕ್ಲಬ್ ಕಲ್ಯಾಣಪುರ ಇವರು ಉದ್ಘಾಟಿಸಿದರು. ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ವಿನ್ಸೆಂಟ್ ಆಳ್ವಾ ಅಧ್ಯಕ್ಷತೆಯನ್ನು ವಹಿಸಿದ್ದರು. ಯಶಸ್ವಿ ರಕ್ತದಾನ ಶಿಬಿರದಲ್ಲಿ 87 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ವಿವಿಧ ಸಂಘಟನೆಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
- Advertisement -


