Tuesday, May 7, 2024
Homeಕರಾವಳಿಕಡಬ: ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಕಾಲಿನಲ್ಲಿತ್ತು 14 ಕಲ್ಲುಗಳು: ಗಾಯ ಪರೀಕ್ಷಿಸದೇ ಹೊಲಿಗೆ...

ಕಡಬ: ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಕಾಲಿನಲ್ಲಿತ್ತು 14 ಕಲ್ಲುಗಳು: ಗಾಯ ಪರೀಕ್ಷಿಸದೇ ಹೊಲಿಗೆ ಹಾಕಿದ ನರ್ಸ್ ಗಳು : ಎಕ್ಸರೇಯಲ್ಲಿ ಬಯಲಾಯಿತು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಮಹಾ ನಿರ್ಲಕ್ಷ್ಯ

spot_img
- Advertisement -
- Advertisement -

ಕಡಬ: ಬೈಕ್ ಅಪಘಾತದಲ್ಲಿ ಕಾಲಿಗೆ ಗಾಯವಾಗಿದ್ದ ವ್ಯಕ್ತಿಯ ಗಾಯವನ್ನು ಶುಚಿಗೊಳಿಸದೇ ಹಾಗೆಯೇ ಹೊಲಿಗೆ ಹಾಕಿದ ಪರಿಣಾಮ ಗಾಯ ಉಲ್ಬಣಗೊಂಡು ಎಕ್ಸರೇ ತೆಗೆಸಿದಾಗ ಕಡಬ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಮಹಾ ನಿರ್ಲಕ್ಷ್ಯ ಬಯಲಾಗಿದೆ. ..
ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ, ರೈಲ್ವೇ ಉದ್ಯೋಗಿ ಪುರುಷೋತ್ತಮ ಎಂಬವರಿಗೆ ಏ.25ರಂದು ಕೋಡಿಂಬಾಳ ಸಮೀಪದ ಉಂಡಿಲ ಎಂಬಲ್ಲಿ ಸ್ಕೂಟಿ ಸ್ಕೀಡ್ ಆಗಿ ಬಿದ್ದು ಕಾಲಿಗೆ ಗಾಯವಾಗಿತ್ತು, ಕೂಡಲೇ ಪುರುಷೋತ್ತಮ ಹಾಗೂ ಅವರ ಪತ್ನಿಯನ್ನು ಸ್ಥಳೀಯರು ಕಡಬ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದರು, ಈ ವೇಳೆ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ ಗಾಯಕ್ಕೆ ಸ್ಟಿಚ್ ಹಾಕುವಂತೆ ಸೂಚಿಸಿದ್ದರು. ಈ ಸಂದರ್ಭದಲ್ಲಿ ದಾದಿಯರು ಹಾಗೂ ಸಿಬ್ಬಂದಿ ಗಾಯಕ್ಕೆ ಸ್ಟಿಚ್ ಹಾಕಿದ್ದರು,
ಸ್ಟಿಚ್ ಹಾಕಿ ಒಂದು ವಾರದ ಬಳಿಕವೂ ಗಾಯ ಗುಣವಾಗದೆ, ಉಲ್ಬಣಗೊಂಡಿತ್ತು, ಹಾಗಾಗಿ ಪುರುಷೋತ್ತಮ ಅವರು ಮೇ.4ರಂದು ಕಡಬದ ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಗಾಯದ ಎಕ್ಸರೆ ತೆಗೆಸಿದ್ದರು. ಆ ಕ್ಲಿನಿಕ್ ನಲ್ಲಿದ್ದ ತಜ್ಞ ವೈದ್ಯರು ಎಕ್ಸರೆ ಪರಿಶೀಲಿಸಿದ್ದು ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಅದರಂತೆ ಆಸ್ಪತ್ರೆಯಲ್ಲಿ ಮೇ.4ರಂದು ರಾತ್ರಿ ಸರ್ಜರಿ ನಡೆಸಲಾಗಿದ್ದು ಈ ವೇಳೆ ವೈದ್ಯರಿಗೆ ಬರೋಬ್ಬರಿ 14 ಕಲ್ಲುಗಳು ದೊರೆತಿದೆ. ಗಾಯವಾದ ಆ ದಿನವೇ ಸ್ಟಿಚ್ ಮಾಡುವಾಗ ಸರಿಯಾಗಿ ಶುಚಿಗೊಳಿಸಿ ಸ್ಟಿಚ್ ಮಾಡುತ್ತಿದ್ದರೆ ಗಾಯ ಉಲ್ಬಣಗೊಳ್ಳುತ್ತಿರಲಿಲ್ಲ. ಕೂಡಲೇ ಪುರುಷೋತ್ತಮ ಎಚ್ಚೆತ್ತುಕೊಂಡಿದ್ದರಿಂದ ಅನಾಹುತವೊಂದು ತಪ್ಪಿದೆ.
ಇನ್ನು ಕಡಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ರೀತಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿರೋದು ಇದೇ ಮೊದಲಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!