Tuesday, July 14, 2026
Homeತಾಜಾ ಸುದ್ದಿಒಂದೂವರೆ ವರ್ಷ ಪೂರೈಸಿದ ನಿಗಮ-ಮಂಡಳಿ ಅಧ್ಯಕ್ಷರ ರಾಜೀನಾಮೆಗೆ ಸೂಚಿಸಿದ್ದೇವೆ: ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಒಂದೂವರೆ ವರ್ಷ ಪೂರೈಸಿದ ನಿಗಮ-ಮಂಡಳಿ ಅಧ್ಯಕ್ಷರ ರಾಜೀನಾಮೆಗೆ ಸೂಚಿಸಿದ್ದೇವೆ: ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಮೈಸೂರು: ಒಂದೂವರೆ ವರ್ಷ ಪೂರೈಸಿರುವ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಒಂದೂವರೆ ವರ್ಷ ಪೂರೈಸಿರುವ ಅಧ್ಯಕ್ಷರುಗಳು ರಾಜೀನಾಮೆಗೆ ಸೂಚನೆ ನೀಡಿದ್ದೇವೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರು ತಿಂಗಳ ಹಿಂದೆಯೇ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ ಎಂದು ಹೇಳಿರುವ ಸಿಎಂ, ಒಂದೂವರೆ ವರ್ಷ ಅಧಿಕಾರಿ ಪೂರೈಸಿರುವವರ ಪಟ್ಟಿ ತಯಾರಿಸಿದ್ದೇವೆ,
ಶೀಘ್ರದಲ್ಲೇ ಅದರ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಸದ್ಯ ಹಾಲಿ ಶಾಸಕರು ಮತ್ತು ಮಾಜಿ ಶಾಸಕರನ್ನು ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡದೇ ಇರಲು ತೀರ್ಮಾನಿಸಿದ್ದು, ಕಾರ್ಯಕರ್ತರ ನೇಮಕಾತಿ ಆದೇಶ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ.

- Advertisement -

Latest News

error: Content is protected !!