- Advertisement -
![]()
- Advertisement -
ಬೆಂಗಳೂರು: ಇಪ್ಪತ್ತೈದು ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಾಸಕರು ಅಧ್ಯಕ್ಷರಾಗಿದ್ದ ಎರಡು ವರ್ಷಗಳ ಅವಧಿ ಮುಗಿದಿದ್ದ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಮುಂದಿನ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಣೆ ಮಾಡಲಾಗಿದೆ.
ಒಟ್ಟೂ 34 ಮಂದಿ ಶಾಸಕರ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನದ ಎರಡು ವರ್ಷಗಳ ಅಧಿಕಾರಾವಧಿ ಜನವರಿ 26ಕ್ಕೆ ಮುಕ್ತಾಯವಾಗಿತ್ತು.
ಈ ಪೈಕಿ ಒಟ್ಟು 25 ಮಂದಿ ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಅಧ್ಯಕ್ಷ ಸ್ಥಾನದ ಅವಧಿ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
- Advertisement -


