Friday, June 5, 2026
Homeತಾಜಾ ಸುದ್ದಿCBSE: 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ!

CBSE: 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ!

- Advertisement -
- Advertisement -

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದೆ..

ಇಂದು (ಏಪ್ರಿಲ್ 14) ತಜ್ಞರ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದು, ಸಭೆಯ ಬಳಿಕ ಮಾತಾಡಿರುವ ಪ್ರಧಾನಿ ಮೋದಿ, ಸಿಬಿಎಸ್‍ ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದ್ದು, 12ನೇ ತರಗತಿಯ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಶಿಕ್ಷಣ ಸಚಿವ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಮೇ 4 ರಿಂದ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಆರಂಭವಾಗಲಿದ್ದವು. ಆದರೆ, ಇಂದು ಸಭೆಯಲ್ಲಿ ಚರ್ಚಿಸಿದ ಬಳಿಕ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸುವ ನಿರ್ಣಯ ಕೈಗೊಳ್ಳಲಾಯಿತು. ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 1 ರ ನಂತರ ನೂತನ ವೇಳಾಪಟ್ಟಿ ಪ್ರಕಟಿಸುವುದಾಗಿ ತಿಳಿಸಿದೆ.

ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಹಾಗೂ ಪೋಷಕರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

- Advertisement -

Latest News

error: Content is protected !!