Thursday, June 4, 2026
Homeತಾಜಾ ಸುದ್ದಿಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳು ಢಿಕ್ಕಿ; ಓರ್ವ ಸಾವು ,35ಕ್ಕೂ ಹೆಚ್ಚು ಮಂದಿ ನಾಪತ್ತೆ!

ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳು ಢಿಕ್ಕಿ; ಓರ್ವ ಸಾವು ,35ಕ್ಕೂ ಹೆಚ್ಚು ಮಂದಿ ನಾಪತ್ತೆ!

- Advertisement -
- Advertisement -

ಗುವಾಹಟಿ: ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್ ನಲ್ಲಿ ಈ ಘಟನೆ ನಡೆದಿದ್ದು, ಮಾ ಕಮಲ ದೋಣಿ ನಿಮಾತಿ ಘಾಟ್ ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪ್ಕೈಗೆ ಡಿಕ್ಕಿ ಹೊಡೆದ ಪರಿಣಾಮ ದೋಣಿ ಮುಳುಗಿದೆ.

ಮೂಲಗಳ ಪ್ರಕಾರ ಈವರೆಗೆ ಓರ್ವ ಮಹಿಳೆಯ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಹಲವರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ.

ಸಂವಹನ ಸಮಸ್ಯೆಯಿಂದ ಎರಡು ದೋಣಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯಾದ ಕೂಡಲೇ ಒಂದು ದೋಣಿ ಮುಳುಗಿ ಹೋಗಿದೆ. ಎರಡನೇ ದೋಣಿ ಕೂಡ ಮುಳುಗುವ ಹಂತದಲ್ಲಿದ್ದಾಗ ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿ, ಹಲವರನ್ನು ರಕ್ಷಣೆ ಮಾಡಿದದ್ದಾರೆ.

ಸಣ್ಣ ದೋಣಿಯಲ್ಲಿ 40 ಮಂದಿಯಿದ್ದು. ದೊಡ್ಡ ದೋಣಿಯಲ್ಲಿ 120 ಮಂದಿ ಜನರಿದ್ದರು ಎಂದು ತಿಳಿದುಬಂದಿದೆ. ಇದೀಗ ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ನದಿಯಲ್ಲಿ ಎನ್’ಡಿಆರ್’ಎಫ್ ಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಾಪತ್ತೆಯಾಗಿರುವವರು ಜಲಸಮಾಧಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!