Saturday, June 6, 2026
HomeUncategorizedಉತ್ತರ ಪ್ರದೇಶದಲ್ಲಿ ಮುಂದುವರಿದ ಮಹಿಳೆಯರ ಮೇಲಿನ ಕ್ರೌರ್ಯ- ತುಂಡರಿಸಿದ ಸ್ಥಿತಿಯಲ್ಲಿ 20 ವರ್ಷದ ಯುವತಿಯ ದೇಹ...

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಹಿಳೆಯರ ಮೇಲಿನ ಕ್ರೌರ್ಯ- ತುಂಡರಿಸಿದ ಸ್ಥಿತಿಯಲ್ಲಿ 20 ವರ್ಷದ ಯುವತಿಯ ದೇಹ ಪತ್ತೆ

- Advertisement -
- Advertisement -

ಲಖನೌ:ಹಥ್ರಾಸ್ ಸಾಮೂಹಿಕ ಅತ್ಯಾಚಾರದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಕ್ರೌರ್ಯ ನಿರಂತರವಾಗಿ ಮುಂದುವರಿದಿದೆ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ 20 ವರ್ಷದ ಯುವತಿಯೊಬ್ಬಳ ದೇಹ ತುಂಡರಿಸಿರುವ ಘಟನೆ ವರದಿಯಾಗಿದೆ.

ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಹೊರವಲಯದ ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳ ದೇಹ ತುಂಡರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಗೆ ಸುಮಾರು 20 ವರ್ಷ ಎಂದು ಅಂದಾಜಿಸಲಾಗಿದೆ.

ಇನ್ನು ಘಟನೆ ಕುರಿತಂತೆ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕಿದ್ದು, ಮೃತ ಯುವತಿ ಕಳೆದ ಸೆಪ್ಟೆಂಬರ್ 26ರಂದು ನಾಪತ್ತೆಯಾಗಿದ್ದಳು ಎಂದು ಹೇಳಲಾಗುತ್ತಿದ್ದು,ಯುವತಿಯ ಕುಟುಂಬದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಅಂತೆಯೇ ಯುವತಿ ದೇಹದ ಕೆಲ ಭಾಗಗಳನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ರವಾನಿಸಿದ್ದು, ಕೃತ್ಯಕ್ಕೆ ಕೌಟುಂಬಿಕ ಆಸ್ತಿ ವಿವಾದ ಕಾರಣ ಎನ್ನಲಾಗಿದೆ.

- Advertisement -

Latest News

error: Content is protected !!