- Advertisement -


- Advertisement -
ಸುರತ್ಕಲ್: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಹೊಸಂಗಡಿ ನಿವಾಸಿ ಸೀನ ಎಂಬವರ ಪುತ್ರ ಕಿಶೋರ್ (32) ಅವರ ಮೃತದೇಹವು ಸೋಮವಾರ ಸಂಜೆ ಹೊಸಂಗಡಿಯ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರಟಿದ್ದ ಕಿಶೋರ್ ಮರಳಿ ಬಾರದೆ ನಾಪತ್ತೆಯಾಗಿದ್ದರು. ಇದೀಗ ಅವರ ಶವ ನದಿಯಲ್ಲಿ ಸಿಕ್ಕಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ವೇಣೂರು ಪೊಲೀಸರು ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ.
ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.
- Advertisement -


