Wednesday, August 19, 2026
Homeಕರಾವಳಿಮೂಡುಬಿದಿರೆಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮೂಡುಬಿದಿರೆಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

- Advertisement -
- Advertisement -

ಮೂಡುಬಿದಿರೆ ತಾಲೂಕಿನ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ, 34 ವರ್ಷದ ಅವಿವಾಹಿತ ಯುವಕ ಕಾರ್ತಿಕ್ ಶೆಟ್ಟಿ ಅವರು ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದರು.

ಜೆಸಿಬಿ ಮತ್ತು ಹಿಟಾಚಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಇವರ ಮೃತದೇಹವು ಶನಿವಾರ ಬೆಳಗ್ಗೆ ಮನೆಯ ಸಮೀಪದ ಶೆಡ್‌ವೊಂದರ ಹೊರಗೆ ಪತ್ತೆಯಾಗಿದೆ. ಈ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಇದು ಹೃದಯಾಘಾತದಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ.

- Advertisement -

Latest News

error: Content is protected !!