Monday, May 20, 2024
Homeಕರಾವಳಿಪುತ್ತೂರು: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಅಪಘಾತ; ಬೈಕ್ ನಲ್ಲಿದ್ದ ಮೂವರಿಗೆ ಗಾಯ

ಪುತ್ತೂರು: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಅಪಘಾತ; ಬೈಕ್ ನಲ್ಲಿದ್ದ ಮೂವರಿಗೆ ಗಾಯ

spot_img
- Advertisement -
- Advertisement -

ಪುತ್ತೂರುಬೊಲೆರೊ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ- ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ನಡುವೆ ಈ ಅಪಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಕನ್ಯಾನ ನಿವಾಸಿಗಳಾದ ಮಗು ಸಹಿತ ಮೂವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು  ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಬೈಕ್ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

- Advertisement -
spot_img

Latest News

error: Content is protected !!