Tuesday, June 23, 2026
Homeಕರಾವಳಿಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

- Advertisement -
- Advertisement -

ಮಂಗಳೂರು: ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದು, ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಗ್ರಾಹಕರು ಮತ್ತು ಅಭಿಮಾನಿಗಳಿಗಾಗಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಕಿಂಗ್ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಯಿಂದಲೇ ಪ್ರವೇಶ ಆರಂಭವಾಗಲಿರುವ ಈ ಹೈ-ಪ್ರೊಫೈಲ್ ಈವೆಂಟ್‌ನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಪ್ರಮುಖ ಉದ್ಯಮಿಗಳು ಹಾಗೂ ಸಾರ್ವಜನಿಕ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಕಡ್ಡಾಯವಾಗಿ ಪೂರ್ವ ನೋಂದಣಿ ಅಗತ್ಯವಿದ್ದು, ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಇನ್ನು ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿರುವ ರೋಹನ್ ಕಾರ್ಪೊರೇಶನ್, ಕರಾವಳಿ ಕರ್ನಾಟಕದಲ್ಲಿ ಹಲವು ಯಶಸ್ವಿ ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಸಂಸ್ಥೆಯಾಗಿದೆ.

- Advertisement -

Latest News

error: Content is protected !!