Tuesday, June 23, 2026
Homeತಾಜಾ ಸುದ್ದಿಬಾಲಿವುಡ್‌ನ ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್‌ ಬಿಜೆಪಿಗೆ ಸೇರ್ಪಡೆ

ಬಾಲಿವುಡ್‌ನ ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್‌ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

‘ಕನ್ನಡ ನಾಡಿನ ಜೀವನದಿ’ ಖ್ಯಾತಿಯ ಬಾಲಿವುಡ್‌ನ ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್‌ ಅವರು ಶನಿವಾರದಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ನಂತರದಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ, ’ಮೋದಿ ನೇತೃತ್ವದ ಬಿಜೆಪಿ ಪಕ್ಷಕ್ಕೆ ಸೇರಿರುವುದು ನನಗೆ ಸಂತಸ ತಂದಿದೆ. ಬಿಜೆಪಿ ಸನಾತನ ಧರ್ಮದೊಂದಿಗೆ ಆಳವಾದ ಸಂಬಂಧವನ್ನು ಹೊಂದಿರುವ ಸರ್ಕಾರ ಹಾಗೂ ಜನಗಳನ್ನು ಹೊಂದಿದೆ.ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ,’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು. 

ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಮತ್ತು ಮುಖ್ಯ ವಕ್ತಾರ ಅನಿಲ್‌ ಬಲೂನಿ ಮತ್ತು ಇತರರು ಇದ್ದರು.

- Advertisement -

Latest News

error: Content is protected !!