Tuesday, May 14, 2024
Homeತಾಜಾ ಸುದ್ದಿಕೇರಳದ ಕಣ್ಣೂರಿನಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ

ಕೇರಳದ ಕಣ್ಣೂರಿನಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ

spot_img
- Advertisement -
- Advertisement -

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮಂಗಳವಾರ ನಸುಕಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಪಯ್ಯನ್ನೂರ್ ಕಚೇರಿ ಮೇಲೆ ಬಾಂಬ್ ಎಸೆಯಲಾಗಿದೆ. ಕಚೇರಿ ಕಟ್ಟಡದ ಕಿಟಕಿಗಳು ಮತ್ತು ಬಾಗಿಲುಗಳು ಬಾಂಬ್ ದಾಳಿಗೆ ಛಿದ್ರವಾಗಿವೆ. ನೆಲದಲ್ಲಿದ್ದ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಚಿತ್ರಗಳಲ್ಲಿ ದಾಖಲಾಗಿವೆ.

ಬಾಂಬ್ ಸಿಡಿದ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದಕ್ಕೂ ಮುನ್ನ ಬೈಕ್‌ನಲ್ಲಿ ಬಂದ ಇಬ್ಬರು ದಾಳಿಕೋರರು ಆ ಪ್ರದೇಶದಲ್ಲಿ ಪರಿಶೀಲನೆ ನಡೆಸಿರುವುದು ಕೂಡ ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ ಸೆರೆಯಾಗಿದೆ. ಮುಂಜಾನೆ ಈ ದಾಳಿ ನಡೆದಿದ್ದರಿಂದ ಕಚೇರಿಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಕಣ್ಣೂರು ಜಿಲ್ಲೆಯ ಪಯ್ಯನ್ನೂರ್‌ನಲ್ಲಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಮಬ್ ಎಸೆಯಲಾಗಿದೆ. ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದು ಚೂರಾಗಿವೆ” ಎಂದು ಪಯ್ಯನ್ನೂರ್ ಪೊಲೀಸರು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಕಚೇರಿಯು ಪೊಲೀಸ್ ಠಾಣೆಯ ಸಮೀಪದಲ್ಲಿಯೇ ಇದೆ. ಆದರೂ ಕಚೇರಿ ಮೇಲೆ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆ ಬಳಿಕ ಈ ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಈ ದಾಳಿಯಲ್ಲಿ ಸಿಪಿಐ (ಎಂ) ಕೈವಾಡ ಇದೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಅನುಮಾನಿಸಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. “ದಾಳಿಯಲ್ಲಿ ಸಿಪಿಎಂ ಕೈವಾಡ ಇದೆ ಎಂಬ ಶಂಕೆ ನಮಗಿದೆ. ಚಿನ್ನ ಕಳ್ಳಸಾಗಣೆ ಆರೋಪಿ ಬಹಿರಂಗ ಪಡಿಸಿದ ಸಂಗತಿ ಅದರ ಕುತ್ತಿಗೆಗೆ ಉರುಳಾಗುವ ಸ್ಥಿತಿ ಎದುರಾಗಿದೆ. ಹೀಗಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಆಡಳಿತಾರೂಢ ಪಕ್ಷ ಅನೇಕ ತಂತ್ರಗಳನ್ನು ಮಾಡುತ್ತಿದೆ” ಎಂದು ಕಣ್ಣೂರು ಜಿಲ್ಲೆ ಬಿಜೆಪಿ ಅಧ್ಯಕ್ಷ ಎನ್ ಹರಿದಾಸನ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!