Wednesday, July 15, 2026
Homeಕರಾವಳಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಬೆದರಿಕೆ; ಪೊಲೀಸರಿಂದ ಬಿಗಿ ಭದ್ರತೆ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಬೆದರಿಕೆ; ಪೊಲೀಸರಿಂದ ಬಿಗಿ ಭದ್ರತೆ

- Advertisement -
- Advertisement -

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಈ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಮೂಲಗಳ ಪ್ರಕಾರ, ಏಪ್ರಿಲ್ 29 ರಂದು ಇಮೇಲ್ ಸ್ವೀಕರಿಸಲಾಗಿದೆ. ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆದರಿಕೆಯ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ದೂರು ನೀಡಿದ್ದು, ಇಮೇಲ್‌ನ ಮೂಲದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!