Monday, June 29, 2026
Homeಕರಾವಳಿಮಂಗಳೂರುಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್

ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್

- Advertisement -
- Advertisement -

ಮಂಗಳೂರಿನ ಬಿಜೈ ನಲ್ಲಿರುವ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಶಾಲಾಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಮಂಗಳೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಸಂದೇಶಗಳು ಬಂದಿದ್ದವು.ಇದೀಗ ಮಂಗಳೂರಿನ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಯಾರು ಇಮೇಲ್ ಕಳುಹಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಈವರೆಗೆ ನಡೆದ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!