Thursday, June 25, 2026
Homeತಾಜಾ ಸುದ್ದಿಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮನೆಗೆ ಬಾಂಬ್‌ ಬೆದರಿಕೆ; ಮನೆ ಮೇಲೆ ಪೊಲೀಸರ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮನೆಗೆ ಬಾಂಬ್‌ ಬೆದರಿಕೆ; ಮನೆ ಮೇಲೆ ಪೊಲೀಸರ ಹದ್ದಿನ ಕಣ್ಣು

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ.

ಅಕ್ಟೋಬರ್ 11ರಂದು ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆಯ ಸಂದೇಶವನ್ನು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‍ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈಮೇಲ್‍ನಲ್ಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರ ನಿವಾಸಗಳಲ್ಲಿ ನಾಲ್ಕು ಆರ್‍ಡಿಎಕ್ಸ್ ಹಾಗೂ ಸುಧಾರಿತ ಐಇಡಿಗಳನ್ನು ಇರಿಸಲಾಗಿದೆ. ಅವುಗಳನ್ನು ರಿಮೋಟ್ ಮೂಲಕ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು.‌

ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಾಂಬ್ ಪತ್ತೆ ದಳ ಎರಡೂ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

Latest News

error: Content is protected !!