Monday, June 22, 2026
Homeಅಪರಾಧಉಡುಪಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ತೀವ್ರ ಶೋಧ ಕಾರ್ಯ, ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ತೀವ್ರ ಶೋಧ ಕಾರ್ಯ, ಬಿಗಿ ಪೊಲೀಸ್ ಬಂದೋಬಸ್ತ್

- Advertisement -
- Advertisement -

ಉಡುಪಿಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣಕ್ಕೆ ಸೋಮವಾರ ಬೆಳಿಗ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಬಗ್ಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಇಡೀ ನ್ಯಾಯಾಲಯ ಸಂಕೀರ್ಣದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯದ ಕಟ್ಟಡಗಳು, ಕಚೇರಿಗಳು ಹಾಗೂ ಆವರಣದ ಮೂಲೆ ಮೂಲೆಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಇಡೀ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಸದ್ಯ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು, ಬೆದರಿಕೆ ಇ-ಮೇಲ್ ಬಂದ ಮೂಲವನ್ನು ಪತ್ತೆಹಚ್ಚಲು ಸೈಬರ್ ಕ್ರೈಮ್ ವಿಭಾಗದ ನೆರವಿನೊಂದಿಗೆ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!