Thursday, June 25, 2026
Homeತಾಜಾ ಸುದ್ದಿವಿಧಾನಸೌಧಕ್ಕೆ ಬಾಂಬ್ ಬೆದರಿಕೆ

ವಿಧಾನಸೌಧಕ್ಕೆ ಬಾಂಬ್ ಬೆದರಿಕೆ

- Advertisement -
- Advertisement -

ಬೆಂಗಳೂರು: ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ ಎಂಬುದಾಗಿ ವ್ಯಕ್ತಿಯೊಬ್ಬರು ಕರೆ ಮಾಡಿದ ಹಿನ್ನೆಲೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಿನ್ನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದಂತ ಬಾಂಬ್ ನಿಷ್ಕ್ರೀಯ ದಳ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಕರೆ ಎಂಬುದಾಗಿ ತಿಳಿದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಫ್ಟ್ ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಕಚೇರಿಗೆ ಶುಕ್ರವಾರದಂದು ಕರೆ ಮಾಡಿದ್ದ ವ್ಯಕ್ತಿಯೊಬ್ಬ, ವಿಧಾನಸೌಧಕ್ಕೆ ಬಾಂಬ್ ಇರಿಸಲಾಗಿದೆ. ಅದು ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬುದಾಗಿ ಹೇಳಿದ್ದನು. ಈ ಬಗ್ಗೆ ಪರಿಶೀಲನೆ ನಡೆಸಿದಾಗ, ಇದೊಂದು ಹುಸಿಬಾಂಬ್ ಕರೆ ಎಂದು ತಿಳಿದು ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿದ್ದಂತ ಪೊಲೀಸರು, ತನಿಖೆಗೆ ಇಳಿದಿದ್ದರು. ಇದೀಗ ಪೊಲೀಸರು ಹೆಬ್ಬಗೋಡಿಯ ನಿವಾಸಿ 41 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಬಾಂಬ್ ಬೆದರಿಕೆ ಕರೆ ಮಾಡಿರೋ ಹಿನ್ನಲೆಯಲ್ಲಿ ಬಂಧಿಸಲಾಗಿದೆ. ಯಾವ ಕಾರಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.

- Advertisement -

Latest News

error: Content is protected !!