Wednesday, June 3, 2026
Homeತಾಜಾ ಸುದ್ದಿಇಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಇಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ನವದೆಹಲಿಗೆ ತೆರಳಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಗೌರವಾರ್ಥ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿರುವ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಬವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ನಿಗದಿಯಾಗಿರುವ ಸಂಪುಟ ಸಭೆ ಮುಗಿಸಿಕೊಂಡು ನವದೆಹಲಿಗೆ ತೆರಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದು, ಶನಿವಾರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಜುಲೈ 24 ರಂದು ಮೂರು ದಿನಗಳ ಅಧಿಕೃತ ಭೇಟಿಗಾಗಿ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಜುಲೈ 24 ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!