Tuesday, May 21, 2024
Homeಕರಾವಳಿಮಂಗಳೂರು: ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿ ಗೆ...

ಮಂಗಳೂರು: ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿ ಗೆ ಬೀಗ ಜಡಿದ ಅಧಿಕಾರಿಗಳು

spot_img
- Advertisement -
- Advertisement -

ಮಂಗಳೂರು: ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾದ ಹಿನ್ನೆಲೆ  ಮುಂದಿನ ಆದೇಶದವರೆಗೆ ಮಂಗಳೂರು ಅಡ್ಯಾರ್​​ನಲ್ಲಿರುವ ಬೊಂಡ ಫ್ಯಾಕ್ಟರಿ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

ಇನ್ನು ಎಳೆನೀರು ಜೊತೆಗೆ ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್ ಜಾರಿಗೊಳಿಸಿದ್ದಾರೆ. ಸೋಮವಾರ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾಗಿದ್ದರು. ಹೊರ ರೋಗಿಗಳಾಗಿ 84 ಮಂದಿ ಹಾಗೂ ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 23 ಮಂದಿ ಮಾತ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅನೇಕರು ಒಳರೋಗಿಗಳಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದ್ದು ನಿರಂತರ ನಿಗಾ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೊಂಡ ನೀರಿನ ಸ್ಯಾಂಪಲ್ಸ್‌ ಗಳನ್ನು ಸಂಗ್ರಹಿಸಿದ ಅಧಿಕಾರಿಗಳು ಅದನ್ನು ಬೆಂಗಳೂರಿನ ಪ್ರಯೋಗಶಾಲೆಗೆ ಕಳುಹಿಸಿಕೊಟ್ಟಿದ್ದು, ಒಂದೆರಡು ದಿನಗಳಲ್ಲಿ ಅದರ ವರದಿ ಬರಲಿದ್ದು ಬಳಿಕ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಂದ್ಹಾಗೆ ಎಳನೀರು ತೆಗೆದ ಮೂರು ಗಂಟೆಗಳ ಒಳಗೆ ಅದನ್ನು ಸೇವನೆ ಮಾಡಬೇಕು. ಅದು ಅವಧಿ ಮೀರಿದರೆ ಕೆಟ್ಟು ದೇಹದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿದ್ದು ಪ್ರಯೋಗಲಯದ ವರದಿ ಬಳಿಕವೇ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಗುರುವಾರ ಆಹಾರ ಸುರಕ್ಷತೆಯ ಜಿಲ್ಲಾ ಅಂಕಿತ ಅಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ತಂಡ ಮತ್ತೆ ಬೊಂಡ ಫ್ಯಾಕ್ಟರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದೆ‌. ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರೋತ್ಪಗಳನ್ನು ಮಾರಾಟ ಮಾಡದಂತೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ, ಸದ್ಯ ಫ್ಯಾಕ್ಟರಿ ಬಂದ್ ಮಾಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!