- Advertisement -
- Advertisement -
ಮಂಗಳೂರು: ವಿಕಾಸ್ ಕುಮಾರ್ ಪುತ್ತೂರು ಬರೆದಿರುವ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ ಮಂಗಳೂರಿನಲ್ಲಿ ಇಂದು ಲೋಕಾರ್ಪಣೆಗೊಂಡಿತು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಮಂಗಳೂರಿನ ಪುರಭವನದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟಿಸ್ ಸಂವಿಧಾನ ಸನ್ಮಾನ ಕಾರ್ಯಕ್ರಮ ಆಯೋಜಿಸಿತ್ತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಪುಸ್ತಕ ಪರಿಚಯ ಮಾಡಿದರು. .
ಡಾ. ಹೃಷಿಕೇಷ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸಂವಿಧಾನ ಬದಲಾಯಿಸಿದ್ದು ಯಾರು ಪುಸ್ತಕ ನೀಡಿ ಗೌರವಿಸಲಾಯಿತು.
- Advertisement -