Thursday, June 4, 2026
Homeಕರಾವಳಿಸಂಸದ ನಳೀನ್ ಕುಮಾರ್ ಕಟೀಲ್ ಐದು ವರ್ಷಗಳ ಸಾಧನೆಯ ಪುಸ್ತಕ ಬಿಡುಗಡೆ

ಸಂಸದ ನಳೀನ್ ಕುಮಾರ್ ಕಟೀಲ್ ಐದು ವರ್ಷಗಳ ಸಾಧನೆಯ ಪುಸ್ತಕ ಬಿಡುಗಡೆ

- Advertisement -
- Advertisement -

ಮಂಗಳೂರು: ನಳೀನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಮೂರನೇಯ ಅವಧಿಯಲ್ಲಿ ಜಿಲ್ಲೆಗೆ ತಂದ ಅನುದಾನ ಮತ್ತು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ನಳೀನ್ ಕುಮಾರ್ ಕಟೀಲ್ ಪುಸ್ತಕ ಬಿಡುಗಡೆಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್ ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಳೀನ್ ಕುಮಾರ್ ಕಟೀಲ್ ಕೈಗೊಂಡ ಸಂಘಟನಾ ಕಾರ್ಯಗಳು ಹಾಗೂ ಮಾಡಿದ ಸಾಧನೆಗಳ ಪಕ್ಷಿನೋಟವನ್ನೂ ಕಿರುಹೊತ್ತಿಗೆ ಒಳಗೊಂಡಿದೆ.

- Advertisement -

Latest News

error: Content is protected !!