- Advertisement -
![]()
- Advertisement -
ಮೈಸೂರು: ಬುಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವನ್ನು ಅವರು ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ಅದ್ಧೂರಿ ಚಾಲನೆ ನೀಡಿದ್ದು, ಈ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವರು ಗಣ್ಯರು, ಶಾಸಕರು ಉಪಸ್ಥಿತರಿದ್ದರು.
- Advertisement -


