- Advertisement -
![]()
- Advertisement -
ಬಳ್ಳಾರಿ; ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಶತ್ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.
ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು.
- Advertisement -


