- Advertisement -
- Advertisement -
ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ವಿರಾಜ್ ಮೆಂಡನ್(24) ಆತ್ಮಹತ್ಯೆಗೆ ಶರಣಾದವರು
ವಿರಾಜ್ ಮೆಂಡನ್ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ,ಒಳ್ಳೆಯ ಕ್ರೀಡಾಪಟು ಎಂಬ ಹೆಸರನ್ನು ಪಡೆದಿದ್ದರು. ಇಂದು ಶಾಂತಿನಗರದಲ್ಲಿರುವ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
- Advertisement -