Friday, June 5, 2026
Homeಕರಾವಳಿಎಸ್ಸೆಸೆಲ್ಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಬೇಸರ: ಕಾರ್ಕಳದಲ್ಲಿ ಆತ್ಮಹತ್ಯೆಗೆ ಶರಣಾದ ಬಾಲಕ

ಎಸ್ಸೆಸೆಲ್ಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಬೇಸರ: ಕಾರ್ಕಳದಲ್ಲಿ ಆತ್ಮಹತ್ಯೆಗೆ ಶರಣಾದ ಬಾಲಕ

- Advertisement -
- Advertisement -

ಕಾರ್ಕಳ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.  ಅಗ್ನೀಶ್ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ನಿವೃತ್ತ ಸೈನಿಕ ಸನತ್‌ ಕುಮಾರ್‌ ಎಂಬವರ ಪುತ್ರ ಅಗ್ನೀಶ್ ಕಾರ್ಕಳ ಹವಾಲ್ದಾರ್‌ ಬೆಟ್ಟುವಿನ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನಿಗೆ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 77 ಫಲಿತಾಂಶ ಬಂದಿತ್ತು. ಆತ, ಅದಕ್ಕಿಂತ ಹೆಚ್ಚಿನ ಅಂಕ ನಿರೀಕ್ಷಿಸಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!