Thursday, May 16, 2024
Homeಕರಾವಳಿಬೆಳ್ತಂಗಡಿಯ ಕಕ್ಕಿಂಜೆಯಲ್ಲಿ ನೀರಿನಲ್ಲಿ ಮುಳುಗಿ ಬಾಲಕ ಸಾವು

ಬೆಳ್ತಂಗಡಿಯ ಕಕ್ಕಿಂಜೆಯಲ್ಲಿ ನೀರಿನಲ್ಲಿ ಮುಳುಗಿ ಬಾಲಕ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಕಕ್ಕಿಂಜೆ ಸಮೀಪದ ಚಿಬಿದ್ರೆ ಗ್ರಾಮದ ಅನ್ನಾರು ನದಿಯಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

8 ವರ್ಷದ ಬಾಲಕ ಇನಾಯತುಲ್ಲಾ ಮೃತ ಬಾಲಕ. ಅಜ್ಜಿಗೆ ಅನಾರೋಗ್ಯ ಇದ್ದುದರಿಂದ ತಂದೆ , ತಾಯಿ ಜೊತೆ ನಿನ್ನೆ ಬಾಲಕ ಕಕ್ಕಿಂಜೆಗೆ ಬಂದಿದ್ದ. ಉಪಹಾರ ಮುಗಿಸಿ ಮನೆಮಂದಿ ಎಲ್ಲರೂ ಜೊತೆ ಸೇರಿ ಎಂದಿನಂತೆ ಮನೆಯ ಪಕ್ಕದಲ್ಲೇ ಇರುವ ನದಿಗೆ ಬಟ್ಟೆ ಒಗೆಯಲು ತೆರಳಿದ್ದರು.

ಈ ವೇಳೆ ನದಿ ದಡದಲ್ಲಿ ಆಡುತ್ತಿದ್ದ ಬಾಲಕ ಎಲ್ಲರ ಕಣ್ಣ ಮುಂದೆಯೇ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ನೀರಿನಿಂದ‌ ಮೇಲೆತ್ತಿ ಕಕ್ಕಿಂಜೆ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿಂದ ಬೆಳ್ತಂಗಡಿ ಆಸ್ಪತ್ರೆಗೆ ಕರೆತರುವ ದಾರಿ ಮಧ್ಯೆಯೇ ಬಾಲಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!