Thursday, June 4, 2026
Homeಕರಾವಳಿಉಪ್ಪಿನಂಗಡಿಯಲ್ಲಿ ನದಿಯಲ್ಲಿ ಮುಳುಗಿ ಬಾಲಕರಿಬ್ಬರು ಸಾವು

ಉಪ್ಪಿನಂಗಡಿಯಲ್ಲಿ ನದಿಯಲ್ಲಿ ಮುಳುಗಿ ಬಾಲಕರಿಬ್ಬರು ಸಾವು

- Advertisement -
- Advertisement -

ಉಪ್ಪಿನಂಗಡಿ : ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ ಎಂಬವರ ಪುತ್ರರಾದ ನಿಂಗರಾಜು (16) ಮತ್ತು ಸತೀಶ್ (14) ಮೃತ ದುರ್ದೈವಿಗಳು.

ನಿಂಗರಾಜು ಗದಗದಲ್ಲಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ. ಲಾಕ್ ಡೌನ್ ಕಾರಣ ದಿಂದಾಗಿ ಶಾಲೆಗೆ ರಜೆ ನೀಡಲಾಗಿದ್ದು, ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ದತೆಯಲ್ಲಿದ್ದ. ಸತೀಶ್ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಈ ಮಧ್ಯೆ ಉಪ್ಪಿನಂಗಡಿಯ ಇಳಂತಿಲದ ಕೇದಾರ ಮನೆಯ ತೋಟದ ಕೆಲಸದಲ್ಲಿದ್ದ ತನ್ನ ತಂದೆ ತಾಯಿಯ ಜೊತೆ ಬಂದಿದ್ದ ಎಂದು ತಿಳಿದುಬಂದಿದೆ.

ನಿನ್ನೆ ಹೆತ್ತವರು ಕಾರ್ಯ ನಿಮಿತ್ತ ಪೇಟೆಗೆ ಹೋಗಿದ್ದ ಸಂದರ್ಭ ನದಿಯ ಆಳ ಅರಿಯದೆ ಸ್ನಾನಕ್ಕೆಂದು ಇವರು ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಬಾಲಕರಿಬ್ಬರು ನದಿಯಲ್ಲಿ ಮುಳುಗಿದ್ದಾರೆ ಎಂಬ ಮಾಹಿತಿ ಪಡೆದಾಕ್ಷಣ ಎಸ್ಕೆಎಸ್ಸೆಸ್ಸೆಫ್ ಉಪ್ಪಿನಂಗಡಿ ವಿಖಾಯ ತಂಡದ ಸ್ವಯಂ ಸೇವಕರಾದ ಯು.ಟಿ. ಫಯಾಝ್, ಬಶೀರ್, ರಶೀದ್, ಸಲಾಂ ಮತ್ತು ಸ್ಥಳೀಯರಾದ ಆಶ್ರಫ್ ಅಂಡೆತ್ತಡ್ಕ ಎಂಬವರು ಸ್ಥಳಕ್ಕೆ ಧಾವಿಸಿ ನೀರಿಗೆ ದುಮುಕಿ ಬಾಲಕರಿಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!