Tuesday, June 18, 2024
Homeಚಿಕ್ಕಮಗಳೂರುಚಿಕ್ಕಮಗಳೂರು : ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳುವಾಗ ವಿದ್ಯುತ್ ಶಾಕ್; ಏಳನೇ ತರಗತಿ...

ಚಿಕ್ಕಮಗಳೂರು : ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳುವಾಗ ವಿದ್ಯುತ್ ಶಾಕ್; ಏಳನೇ ತರಗತಿ ಬಾಲಕ ಸಾವು

spot_img
- Advertisement -
- Advertisement -

ಚಿಕ್ಕಮಗಳೂರು : ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳುವಾಗ ವಿದ್ಯುತ್ ಶಾಕ್ ತಗುಲಿ ಏಳನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಆಕಾಶ್ (13) ಮೃತ ದುರ್ದೈವಿ.

ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ  ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು.ಮರದಿಂದ ಜಾರಿ ಬೀಳುವಾಗ ಬಾಲಕ ಆಕಾಶ್ ವಿದ್ಯುತ್ ತಂತಿ ಹಿಡಿದಿದ್ದಾನೆ. ಪರಿಣಾಮ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಆಕಾಶ್ ಸಾವನ್ನಪ್ಪಿದ್ದಾನೆ.ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!