Tuesday, June 9, 2026
Homeಕರಾವಳಿಬೆಳ್ತಂಗಡಿ: ಲಾಯಿಲ ರಸ್ತೆ ದಾಟುತ್ತಿದ್ದ ಬಾಲಕನಿಗೆ ಪಿಕಪ್ ವಾಹನ ಡಿಕ್ಕಿ: ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ...

ಬೆಳ್ತಂಗಡಿ: ಲಾಯಿಲ ರಸ್ತೆ ದಾಟುತ್ತಿದ್ದ ಬಾಲಕನಿಗೆ ಪಿಕಪ್ ವಾಹನ ಡಿಕ್ಕಿ: ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಬಾಲಕ ಸಾವು

- Advertisement -
- Advertisement -

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕನೊಬ್ಬ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಅ.18ರಂದು ಲಾಯಿಲ ಜಂಕ್ಷನ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್(10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಇಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ.

ತಕ್ಷಣ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.ಪಿಕಪ್ ವಾಹನ ಚಾಲಕ ವೇಣೂರಿನ ನಿವಾಸಿ ಜಯ ವಿರುದ್ಧ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!