Thursday, June 4, 2026
Homeಕರಾವಳಿಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ:  ಸವಾರ ಸ್ಥಳದಲ್ಲೇ ಸಾವು , ಮತ್ತೊಬ್ಬ ಗಂಭೀರ

ಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ:  ಸವಾರ ಸ್ಥಳದಲ್ಲೇ ಸಾವು , ಮತ್ತೊಬ್ಬ ಗಂಭೀರ

- Advertisement -
- Advertisement -

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ . 25ರ  ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ  ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸವಾರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ್ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿ ಎರಡನೇ ಮಗ ಪುರುಷೋತ್ತಮ (19)  ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ  ತೌಫೀಕ್(17)  ಗಂಭೀರ ಗಾಯಗೊಂಡಿದ್ದಾನೆ.

ತೌಫೀಕ್ ಎಂಬತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿ ಹೊಡೆದ ಪಿಕಪ್ ವಾಹನ ಸ್ಥಳದಿಂದ ಪರಾರಿಯಾಗಿದ್ದು ,ಬೆಳ್ತಂಗಡಿ ಸಂಚಾರಿ ಪೊಲೀಸರು ಪಿಕಪ್ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!