- Advertisement -
- Advertisement -
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಆರು ವರ್ಷದ ಗಂಡು ಮಗು ಶಾಝಿನ್ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮುರ ನಿವಾಸಿ ಸಲೀಂ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಂ ಮತ್ತು ಪತ್ನಿ ಅವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -