Monday, May 13, 2024
Homeಕರಾವಳಿಮಂಗಳೂರು; ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರು ಹಾಗೂ ಸ್ಥಳೀಯರಿಂದ ಪ್ರತಿಭಟನೆ

ಮಂಗಳೂರು; ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರು ಹಾಗೂ ಸ್ಥಳೀಯರಿಂದ ಪ್ರತಿಭಟನೆ

spot_img
- Advertisement -
- Advertisement -

ಮಂಗಳೂರು; ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿದ್ದಕ್ಕೆ ವೈದ್ಯರ ನಿರ್ಲಕ್ಷ್ಯ ಅಂತಾ ಆರೋಪಿಸಿ ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತನ ಕಾಲಿಗೆ ಅಪಘಾತದಲ್ಲಿ ಸಣ್ಣ ಗಾಯವಾಗಿತ್ತು.ಆತನನ್ನು ಸುರತ್ಕಲ್ ನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ. ಆದರೆ ಈತ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ. ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐ ಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು. ಮುಕ್ಕದಲ್ಲಿ ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎಂದು ತಿಳಿದುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

 

- Advertisement -
spot_img

Latest News

error: Content is protected !!