
ಬೆಳ್ತಂಗಡಿ: ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ.
ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ ಉಂಟಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.
ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ, ವೇಣೂರು ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಮತ್ತು ಓಮನ ತಂಡ ,ಬೆಳ್ತಂಗಡಿ ಸಂಚಾರಿ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿಯ ತಂಡ, ಪುಂಜಾಲಕಟ್ಟೆ ಸಬ್ ಇನ್ಸ್ಪೆಕ್ಟರ್ ರಾಜೇಶ್ ತಂಡದವರು ವಿವಿಧ ಅಯಾಮಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.


