Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ : ಆಟವಾಡುವಾಗ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಬೆಳ್ತಂಗಡಿ : ಆಟವಾಡುವಾಗ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು

- Advertisement -
- Advertisement -

ಬೆಳ್ತಂಗಡಿ : ರಜೆ ಇದ್ದ ಕಾರಣ ಪಕ್ಕದ ಮನೆಗೆ ಹೋದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಏಳು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಪಣಕಜೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಮೊಹಮ್ಮದ್ ಹನೀಫ್ ಎಂಬವರ ಎರಡನೇ ಪುತ್ರ ಎರಡನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅನಾನ್(7) ಎಂಬಾತ ಜ.15 ರಂದು ಸಂಜೆ ಮನೆಯ ಪಕ್ಕದ ಮಕ್ಕಳ ಜೊತೆ ಆಟ ಆಡಲು ಹೋಗಿದ್ದ. ಪಕ್ಕದ ಮನೆಯ ಬಾವಿ ಕಟ್ಟೆ ಇಲ್ಲದ ಬಾವಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮನೆಯವರು ತಕ್ಷಣ ಮಗುವನ್ನು ಬಾವಿಯಿಂದ ತೆಗೆದು ಬಾಬಾ ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ಮುಂದಾದಾಗ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಸ್ಥಳ ಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಆಸ್ಪತ್ರೆಗೆ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಸ್ವಂತಾನ ಹೇಳಿದ್ದಾರೆ.

- Advertisement -

Latest News

error: Content is protected !!